ದೆಹಲಿ :
ಖ್ಯಾತ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಕರುನಾಡಿನ ಕರಾವಳಿಯ ಸುಂದರ ಫೋಟೋಗಳನ್ನು ಹಂಚಿಕೊಂಡು ಇದೀಗ ಸುದ್ದಿಯಾಗಿದ್ದಾರೆ.

ಕುಂದಾಪುರ ಬಳಿಯ ಮರವಂತೆಯ ನಯನ ಮನೋಹರ ಕಡಲಕಿನಾರೆಯ ಫೋಟೋ ಹಂಚಿಕೊಂಡು ಮಾಲ್ಡೀವ್ಸ್ ದೇಶಕ್ಕೆ ಟಾಂಗ್ ನೀಡಿದ್ದಾರೆ.
ನಮ್ಮ ದೇಶದಲ್ಲೂ ಸುಂದರ ಕಡಲತೀರ ಇದೆ ಎಂದು ಅವರು ಹೇಳಿದ್ದಾರೆ.

ಉಡುಪಿ ಜಿಲ್ಲೆ ಕುಂದಾಪುರ ಬಳಿಯ ಪ್ರಸಿದ್ದ ಮರವಂತೆ ಬೀಚ್, ಪಾಂಡಿಚೇರಿಯ ಪ್ಯಾರಡೈಸ್ ಬೀಚ್, ಅಂಡಮಾನ್- ನಿಕೋಬಾರ್ ನೈಲ್ ಮತ್ತು ಹ್ಯಾವಾಕ್ ಬೀಚ್ ಫೋಟೋಗಳನ್ನು ಸೆಹ್ವಾಗ್ ಹಂಚಿಕೊಂಡಿದ್ದಾರೆ. ಭಾರತದಲ್ಲಿ ಹಲವರು ಅನ್ವಯಿಸಿದ ಸ್ಥಳಗಳಿವೆ. ಈ ತಾಣಗಳಿಗೆ ಮೂಲ ಸೌಕರ್ಯ ಒದಗಿಸಿದರೆ ಯಾವುದಕ್ಕೂ ಕಡಿಮೆ ಇಲ್ಲ, ಪರಿಸ್ಥಿತಿಯನ್ನು ಅವಕಾಶವಾಗಿ ಪರಿವರ್ತಿಸುವುದು ಭಾರತಕ್ಕೆ ತಿಳಿದಿದೆ. ಹಲವರು ಭಾರತ ಹಾಗೂ ಪ್ರಧಾನ ಮಂತ್ರಿಯನ್ನು ನಿಂದಿಸಿರುವ ಈ ಸಂದರ್ಭವನ್ನು ಉತ್ತಮ ಅವಕಾಶವಾಗಿ ಬಳಸಿಕೊಂಡು ನಮ್ಮ ಸುಂದರ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯ ನೀಡಿ ಆರ್ಥಿಕತೆಯ ವೇಗ ಹೆಚ್ಚಿಸಬೇಕು ಎಂದು ಅವರು ಬರೆದುಕೊಂಡಿದ್ದಾರೆ.

ಉಡುಪಿ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ಉಡುಪಿ ನಿಜಕ್ಕೂ ಅದ್ಭುತ. ಅತ್ಯಂತ ಸುಂದರ ಕಡಲತೀರ. ಪ್ರಾಚೀನ ದೇವಾಲಯ ಹಾಗೂ ಅತ್ಯುತ್ತಮ ಆಹಾರದಿಂದ ಉಡುಪಿ ಅಚ್ಚುಮೆಚ್ಚು ಎಂದು ಹೇಳಿದ್ದಾರೆ.