ಬೆಳಗಾವಿ :
ಬೆಳಗಾವಿ, ಚಿಕ್ಕೋಡಿ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತುಸು ಕಗ್ಗಂಟಾಗಿದೆ. ಬೆಳಗಾವಿಯಲ್ಲಿ ಹಾಲಿ ಸಂಸದೆ ಮಂಗಲಾ ಅಂಗಡಿ ಅವರಿಗೆ ಈ ಬಾರಿ ಟಿಕೆಟ್ ಸಿಗುವುದು ಕಠಿಣ ಎಂಬಂತಿದೆ. ಅವರ ಪುತ್ರಿ ಶ್ರದ್ದಾ ಶೆಟ್ಟರ್ ಇಲ್ಲವೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಸಿಗುವ ಬಗ್ಗೆ ಚರ್ಚೆ ನಡೆದಿದೆ.

ಚಿಕ್ಕೋಡಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ಈ ಬಾರಿ ತಮಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ ತಮ್ಮ ಪುತ್ರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಕಳೆದ ಒಂದು ತಿಂಗಳಿನಿಂದ ಕ್ರಿಯಾಶೀಲರಾಗಿ ಓಡಾಡುತ್ತಿರುವುದರಿಂದ ಆ ಕ್ಷೇತ್ರದ ಬಗ್ಗೆಯೂ ನಡ್ಡಾ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಒಟ್ಟಾರೆ 5 ರಂದು ಬೆಳಗಾವಿಗೆ ಆಗಮಿಸಲಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬೆಳಗಾವಿ, ಚಿಕ್ಕೋಡಿ ಮತ್ತು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮವಾಗಿ ನಡೆಸಲಿದ್ದು ಬಿಜೆಪಿ ಹೈಕಮಾಂಡ್ ನೇರವಾಗಿ ಈಗ ತಲೆದೂರಿರುವ ಕಗ್ಗಂಟಿಗೆ ಪರಿಹಾರ ಒದಗಿಸಲಿದೆ.