ದೆಹಲಿ : ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವರ್ಷದಲ್ಲಿ ಇದು ಎಲ್‌ಕೆ ಅಡ್ವಾಣಿಯವರ ನಾಲ್ಕನೇ ಆಸ್ಪತ್ರೆಗೆ ದಾಖಲಾಗುತ್ತಿದ್ದು, 97 ವರ್ಷದ ಹಿರಿಯ ರಾಜಕಾರಣಿ ಈ ವರ್ಷ ಜೂನ್ ಮತ್ತು ಆಗಸ್ಟ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಡ್ವಾಣಿ ನಿಗಾದಲ್ಲಿಯೇ ಇದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.