ಬೆಂಗಳೂರು: ಹಿರಿಯ ಕವಿ, ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಅವರು ಮೇ 30 ರ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

2019 ಡಿಸೆಂಬರ್‌ ನಲ್ಲಿ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಹಬ್ಬದ ಅಧ್ಯಕ್ಷತೆಯನ್ನು ಎಚ್.ಎಸ್. ವೆಂಕಟೇಶ್ ಮೂರ್ತಿ ವಹಿಸಿದ್ದರು. ಕವಿತೆ ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಮೊದಲಾದ ಪ್ರಕಾರಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮ ಕೊಡುಗೆಯನ್ನು ನೀಡಿದ್ದಾರೆ.

1944ರ ಜೂನ್ 23ರಂದು ಶಿವಮೊಗ್ಗ ಜಿಲ್ಲೆಯ ಹೊದಿಗ್ಗೆರೆ ಗ್ರಾಮದಲ್ಲಿ ಜನಿಸಿದ್ದರು. ಬಾಲ್ಯದ ಹೆಸರು ಶ್ರೀನಿವಾಸ ಎಂಬುದಾಗಿತ್ತು. ತಂದೆ ನಾರಾಯಣ ಭಟ್, ತಾಯಿ ನಾಗರತ್ನಮ್ಮ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು.