ಬೆಂಗಳೂರು : ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿರುವ ಕಾರಣದಿಂದ ವಿಧಾನಮಂಡಲ ಅಧಿವೇಶನ ಬುಧವಾರದವರೆಗೆ ವಿಸ್ತರಣೆಯಾಗಲಿದೆ.

ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಸಿದ್ದರಾಮಯ್ಯ, ‘ಹಾಲಿ ಶಾಸಕ ನಿಧನರಾಗಿರುವುದರಿಂದ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಕಲಾಪ ನಡೆಯುವುದಿಲ್ಲ, ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ’ ಎಂದರು.