ಇಸ್ಲಾಮಾಬಾದ್ :
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ರಾಷ್ಟ್ರೀಯ ಚುನಾವಣೆಯಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿ ಇದೀಗ ಪಾಕಿಸ್ತಾನದ 24 ನೇ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
72 ವರ್ಷದ ಶೆಹಬಾಜ್ ಷರೀಫ್ ಅವರು ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಕಿರಿಯ ಸಹೋದರ. ಪಾಕಿಸ್ಥಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಚುನಾವಣಾ ಪ್ರಚಾರವನ್ನು ಮುನ್ನಡೆಸಿದ್ದರು. ಖಾನ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳನ್ನು ಗಳಿಸಿದರಾದರೂ ಪಿಎಂಎಲ್-ಎನ್ ಮತ್ತು ಪಾಕಿಸ್ಥಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಸಮ್ಮಿಶ್ರ ಸರ್ಕಾರ ರಚಿಸಿವೆ.