ಬೆಳಗಾವಿ : ಬೆಳಗಾವಿಯಲ್ಲಿ ರವಿವಾರ ನಡೆದ ಭಗವಾನ್ ಮಹಾವೀರ ಜಯಂತಿಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಒಂದೇ ವೇದಿಕೆಯಡಿ ಒಂದು ಗಮನ ಸೆಳೆದರು.

ಇಬ್ಬರು ಅಭ್ಯರ್ಥಿಗಳು ಜೈನ ಬಾಂಧವರಲ್ಲಿ ಕೈ ಮುಗಿದು ಈ ಬಾರಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪುತ್ರ ಮೃಣಾಲ್‌ ಹೆಬ್ಬಾಳ್ಕರ್ ಜೊತೆ ಆಗಮಿಸಿದ್ದರು. ಬಿಜೆಪಿ ಪಾಳಯದಲ್ಲಿ ಮಾಜಿ ಶಾಸಕರಾದ ಅಭಯ ಪಾಟೀಲ, ಸಂಜಯ ಪಾಟೀಲ ಉಪಸ್ಥಿತರಿದ್ದರು. ಇವರಿಬ್ಬರೂ ನಾಯಕರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

ಒಟ್ಟಾರೆ, ಈ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಮೃಣಾಲ್‌ ಹೆಬ್ಬಾಳ್ಕರ್ ಒಟ್ಟಿಗೆ ಕಾಣಿಸಿಕೊಂಡಿದ್ದು ಚುನಾವಣೆಯ ಈ ಸಂದರ್ಭದಲ್ಲಿ ಎಲ್ಲರ ಗಮನಸೆಳೆಯಿತು.