ನವದೆಹಲಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟ‌ರ್ ಅವರು ಇತ್ತೀಚೆಗೆ ಮರಳಿ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ, ಅವರು ಬೆಳಗಾವಿ ಕ್ಷೇತ್ರದಿಂದ ಲೋಕಸಭೆ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ವರದಿಯಾಗಿತ್ತು.

ಆದರೆ, ಇದೀಗ ಅವರು ಈ ಬಗೆಗಿನ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಇತ್ತೀಚೆಗಷ್ಟೇ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟ‌ರ್ ದೆಹಲಿಯಲ್ಲಿಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಯಲ್ಲಿರುವ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಕೇಳಿ ಬರುತ್ತಿದೆ ಎಂಬುದು ಗೊತ್ತಿಲ್ಲ. ಆ ಕುರಿತು ಇಂದಿನ ಸಭೆಯಲ್ಲಿ ಯಾವ ಚರ್ಚೆ ಆಗಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.