Join The Telegram | Join The WhatsApp |
ಶಿವಮೊಗ್ಗ :
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ, ಉದ್ಘಾಟನೆಯ ದಿನಾಂಕವನ್ನು ಪ್ರಕಟಿಸಿದರು. ಫೆ. 27 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆಗೆ ಆಗಮಿಸಲಿದ್ದಾರೆ. ಇಡೀ ದೇಶದಲ್ಲಿಯೇ ಕಡಿಮೆ ವೆಚ್ಚದಲ್ಲಿ 7449 ಕೋಟಿ ವೆಚ್ಚದಲ್ಲಿ ಸಿದ್ಧವಾಗಿರುವ ವಿಮಾನ ನಿಲ್ದಾಣ ಇದಾಗಿದೆ. ಗಾತ್ರದಲ್ಲಿ ಬೆಂಗಳೂರು ನಂತರದ ಸ್ಥಾನದಲ್ಲಿದೆ. ಇದಕ್ಕೆ ಕಾರಣೀಭೂತರಾದ ಭೂಮಿ ನೀಡಿರುವ ರೈತರಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು .
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಇಚ್ಛಾಶಕ್ತಿ ಇದ್ದರೆ ಕನಸು ನನಸಾಗಲು ಸಾಧ್ಯ ಎನ್ನುವುದಕ್ಕೆ ವಿಮಾನ ನಿಲ್ದಾಣ ಸಾಕ್ಷಿಯಾಗಿದೆ . ಹಲವು ಎಡರು ತೊಡರುಗಳನ್ನು ಎದುರಿಸಿ ವಿಮಾನ ನಿಲ್ದಾಣ ಸಿದ್ಧವಾಗಿದೆ ಎಂದರು. ನಿಲ್ದಾಣ ಲೋಕಾರ್ಪಣೆಯಾಗಿದ್ದೇ ಶಿವಮೊಗ್ಗ ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಈಗಾಗಲೇ ತಾಂತ್ರಿಕ ಸಲಹೆಗಾರರಾಗಿ ಬ್ರಿಗೇಡಿಯರ್ ಪೂರ್ವಿ ಮತ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಸ್ಟಾರ್ ಏರ್ ಕಾರ್ಯನಿರ್ವಹಿಸಲು ಮುಂದೆ ಬಂದಿದೆ. ಇತರ ವಿಮಾನಯಾನ ಈಗಾಗಲೇ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಅಯನೂರು ಮಂಜುನಾಥ, ರುದ್ರೇಗೌಡ ಉಪಸ್ಥಿತರಿದ್ದರು.
Join The Telegram | Join The WhatsApp |