ಶಿರ್ತಾಡಿ : ಶಿರ್ತಾಡಿಯ ಭುವನ ಜ್ಯೋತಿ ಲೀಗಲ್ ಸ್ಟಡೀಸ್ ಯಲ್ಲಿ ನಡೆಯುತ್ತಿರುವ 3ನೇ ದಿನದ ಅನಾವರಣ-2K24 ಒರಿಯಂಟೇಶನ್ ಕಾರ್ಯಕ್ರಮದಲ್ಲಿ ಬ್ರಹ್ಮಾವರದ ಕ್ರಾಸ್ ಲ್ಯಾಂಡ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ರಾಬರ್ಟ್ ಕ್ಲೈವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಸಂಪನ್ಮೂಲ ವ್ಯಕ್ತಿಗಳು ವಿವಿಧ ಚಟುವಟಿಕೆಯಿಂದ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಸಕಾರಾತ್ಮಕ ಮನೋಭಾವವನ್ನು ರೂಢಿಸಿಕೊಳ್ಳುವುದು, ಜೀವನದ ಗುರಿಗಳನ್ನು ಹೊಂದುವುದು, ಉತ್ತಮ ಸ್ನೇಹಿತರನ್ನು ಆರಿಸಿಕೊಳ್ಳುವುದು, ಉತ್ತಮ ವೃತ್ತಿಯನ್ನು ಆರಿಸುವ ಕುರಿತು ಮಾರ್ಗದರ್ಶನ ನೀಡಿದರು. ವಕೀಲ ವೃತ್ತಿಯ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಂಡು ಗುರಿ ಸಾಧಿಸಿ ಸಂಸ್ಥೆಗೆ ಗೌರವ ತರುವ ಕೆಲಸ ಮಾಡುವಂತೆ ಪ್ರೇರೇಪಿಸಿದರು.

ಭುವನ ಜ್ಯೋತಿ ಎಜುಕೇಶನ್ ಟ್ರಸ್ಟ್ ನ ಪ್ರಶಾಂತ್ ಡಿ ಸೋಜಾ, ರಾಘವೇಂದ್ರ ಪ್ರಭು, ಶ್ರೀಮತಿ ಲತಾ ಎ, ಪ್ರಶಾಂತ್ ಎನ್, ಶರಣಪ್ಪ ಭಾವಿ, ಕಾಲೇಜಿನ ಸಂಸ್ಥೆಯ ಪ್ರಾಂಶುಪಾಲ ಡಾ.ಪ್ರದೀಪ್ ಎಂ.ಡಿ. ಉಪಸ್ಥಿತರಿದ್ದರು. ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕ ಕೌಶಿಕ್ ಸಿ ಕಾರ್ಯಕ್ರಮವನ್ನು ಸಂಯೋಜಿಸಿದರು.