ಮುಂಬಯಿ : ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರೀಟ್ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರನ್ನು ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ 25 ನೇ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಶೌಚಾಲಯ ನಿರ್ಮಾಣಕ್ಕೆ ಹಣ ದುರ್ಬಳಕೆ ಮಾಡಿಕೊಂಡು ಸೋಮಯ್ಯ ದಂಪತಿ 100 ಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಾವುತ್ ಆರೋಪಿಸಿದ್ದರು. ಐಪಿಸಿಯ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ನವೆಂಬರ್ ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನವೇ ಶಿವಸೇನೆಯ ಈ ನಾಯಕನಿಗೆ ಇದೀಗ ನ್ಯಾಯಾಲಯ ಬಿಗ್ ಶಾಕ್ ನೀಡಿದಂತಾಗಿದೆ.