ಚಿಕ್ಕಬಳ್ಳಾಪುರ : ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಆರಂಭವಾಗಿದೆ. ಈ ಕಾಲಾವಧಿಯಲ್ಲಿ ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿದ ಕೋಡಿ ಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಶ್ರಾವಣ ಮಾಸದಲ್ಲಿ ದೇಶದಲ್ಲಿ ಅವಘಟಗಳು ನಡೆಯುತ್ತವೆ ಎಂದು ಆಘಾತಕಾರಿ ಭವಿಷ್ಯ ನುಡಿದರು.
“ಗುರುಗಳು ಶಿಷ್ಯರಾಗುತ್ತಾರೆ. ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ಈ ಬಾರಿ ರಾಜ್ಯದಲ್ಲಿ ಅತಿವೃಷ್ಟಿ ಸಾಧ್ಯತೆ ಇದೆ” ಎಂದು ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ಹೇಳಿದ್ದಾರೆ.