Join The Telegram | Join The WhatsApp |
ಶಿರಸಂಗಿ :
ವಿಶ್ವಕರ್ಮ ಪೂಜಾ ಮಹೋತ್ಸವದ ಅಂಗವಾಗಿ ಶಿರಸಂಗಿ ಶ್ರೀ ಕಾಳಿಕಾದೇವಿ ದೇವಸ್ಥಾನದ ಆವರಣದಲ್ಲಿ ಶ್ರೀ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ, ವಿಶ್ವಕರ್ಮ ಪ್ರತಿಷ್ಠಾನ ಶಿರಸಂಗಿ ಇವರ ಸಹಯೋಗದಲ್ಲಿ ರಾಜ್ಯ ಮಟ್ಟದ ಕಲಾ ಪ್ರದರ್ಶನ 2022 ಕ್ಕೆ ಬಾಗಲಕೋಟೆ ಶಾಸಕ ಡಾ. ವೀರಣ್ಣ ಚರಂತಿಮಠ ಚಾಲನೆ ನೀಡಿದರು.ಅರೆಮಾದನಹಳ್ಳಿಯ ಶ್ರೀ ಶಿವಸುಜ್ಞಾನ ಮಹಾಸ್ವಾಮಿಗಳು ಹಾಗೂ ಚಂದ್ರಶೇಖರ ಸ್ವಾಮಿಗಳು, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ವಿಶ್ವಕರ್ಮ ವಿಕಾಸ ಸಂಸ್ಥೆ ಅಧ್ಯಕ್ಷ ಪಿ.ಬಿ. ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಚಿತ್ರ ಕಲಾವಿದರು. ಶಿಲ್ಪಕಲಾವಿದರು, ಛಾಯಾಗ್ರಾಹಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಲಾವಿದರು ಭಾಗವಹಿಸಿದ್ದರು.
Join The Telegram | Join The WhatsApp |