ಬೆಳಗಾವಿ:
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಬಂಧನ ಖಂಡಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ವೃತ್ತದಲ್ಲಿ ಸೇರಿದ್ದ ಕರವೇ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಶವಯಾತ್ರೆಯ ಅಣುಕು ಪ್ರದರ್ಶನ ನಡೆಸಲು ಪ್ರಯತ್ನಿಸಿದರು. ಪೊಲೀಸರು ಇದನ್ನು ತಡೆಯಲು ಮುಂದಾದರು. ಆಗ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.