ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಇಲ್ಲಿ ವೇದಿಕೆ ಹಂಚಿಕೊಂಡರು.

ಡಾ.ಬಿ.ಆ‌ರ್. ಅಂಬೇಡ್ಕರ್ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್‌, ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ ಸಹಯೋಗದಲ್ಲಿ ಇಲ್ಲಿನ ಮಾನಂದವಾಡಿ ರಸ್ತೆಯ ರೇಷ್ಮೆ ಕಾರ್ಖಾನೆ ಎದುರು ಶನಿವಾರ ಆಯೋಜಿಸಿದ್ದ ‘ಸ್ವಾಭಿಮಾನಿಗೆ ಸಾವಿರದ ನುಡಿನಮನ’ – ವಿ.ಶ್ರೀನಿವಾಸ ಪ್ರಸಾದ್‌ ಶ್ರದ್ದಾಂಜಲಿ ಕಾರ್ಯಕ್ರಮ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು.

ಕುಶಲೋಪರಿ ವಿಚಾರಿಸಿದ ನಾಯಕರು, ಅಕ್ಕಪಕ್ಕದ ಕುರ್ಚಿಯಲ್ಲಿ ಆಸೀನರಾಗಿದ್ದರು. ಯಡಿಯೂರಪ್ಪ ಅವರು ನೀಡಿದ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಆ ಚೀಟಿಯ ಬಗ್ಗೆ ಕೆಲ ಹೊತ್ತು ಮಾತುಕತೆ ನಡೆಸಿದರು.

ಆದರೆ, ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಅವರು ಮುಖ್ಯಮಂತ್ರಿ ಬರುವುದಕ್ಕೆ ಮುನ್ನವೇ ಮಾತನಾಡಿ ಕಾರ್ಯಕ್ರಮದಿಂದ ತರಾತುರಿಯಲ್ಲಿ ನಿರ್ಗಮಿಸಿದರು.