ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದ್ಯಸರಾಗಿ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಹಾಗೂ ಭಾರತೀಯ ಜನತಾ ಪಕ್ಷದ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ಪ್ರಕಟಿಸಿದ್ದಾರೆ.

ಮಂಗಳವಾರ ನಾಮಪತ್ರ ಹಿಂತೆಗೆಯುವ ಕೊನೆಯ ದಿನಾಂಕವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿಲ್ಲದ ಕಾರಣ ಈ ಮೂವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಹಾವೀರ್ ಪ್ರಸಾದ್ ಶರ್ಮಾ ಘೋಷಿಸಿದರು.