ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರನ್ನು ಬರಮಾಡಿಕೊಂಡರು.

ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ , ಸಂಸದ ಸುನಿಲ್ ಬೋಸ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.