Join The Telegram | Join The WhatsApp |
ಬೆಳಗಾವಿ :
ಸಮಾಜಶಾಸ್ತ್ರದ ಪಿತಾಮಹ ಅಗಸ್ಟ್ ಕೋಮ್ಟ್ ಅವರ 226 ನೇ ಜನ್ಮದಿನದ ಪ್ರಯುಕ್ತ ಗುರುವಾರ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಶೌಕತ್ ಅಜಿಮ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಅಗಸ್ಟ್ ಕೋಮ್ಟ್ ಅವರು ಸಮಾಜಶಾಸ್ತ್ರಕ್ಕೆ ಅವರು ನೀಡಿರುವ ಕೊಡುಗೆ ಅತ್ಯಂತ ಮಹತ್ವದಾಗಿದೆ ಎಂದರು.
ಭವಿಷ್ಯದ ದಿನಗಳಲ್ಲಿ ಯುವಕರು ಏನೆಲ್ಲ ಸಮಸ್ಯೆಗಳನ್ನು ಎದುರಿಸಲಿದ್ದಾರೆ ಹಾಗೂ ಅವುಗಳ ಪರಿಹಾರದ ಬಗ್ಗೆ ವಿವರಿಸಿದರು.
21 ನೇ ಶತಮಾನದ ಯುವಕರ ಸವಾಲುಗಳನ್ನು ವಿವರಿಸಿ ಸಮಾಜಶಾಸ್ತ್ರ ವಿಷಯದ ಮಹತ್ವವನ್ನು ಒತ್ತಿ ಹೇಳಿದರು.
ವಿದ್ಯಾರ್ಥಿಗಳು ಪುಸ್ತಕಗಳನ್ನು ನಿರಂತರವಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿ, ಮೊಬೈಲ್ ಮತ್ತು ತಂತ್ರಜ್ಞಾನದ ದಾಸರಾಗಬೇಡಿ ಎಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಲಾಗಿತ್ತು.
ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ,ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ನವೀನ ಕಣಬರಗಿ, ಕಾಲೇಜಿನ ಇತರ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Join The Telegram | Join The WhatsApp |