ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ಸೇವೆಯಾಟವು ಶ್ರೀ ಮಂಜುನಾಥ ಸ್ವಾಮಿ ಹಾಗೂ ಛತ್ರ ಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ನೆರವೇರಿಸಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮೇಳದ ಯಜಮಾನ ಹರ್ಷೇಂದ್ರ ಕುಮಾರ್‌ ಅವರ ಶುಭಾಶೀರ್ವಾದಗಳೊಂದಿಗೆ ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್‌ ಅವರು ಕಲಾವಿದರಿಗೆ ಗೆಜ್ಜೆ ನೀಡುವ ಮೂಲಕ ಶುಭಾರಂಭಗೊಂಡಿತು.

ವ್ಯವಸ್ಥಾಪಕ ಗಿರೀಶ್‌ ಹೆಗ್ಡೆ ಮತ್ತು ಸಿಬಂದಿ ಉಪಸ್ಥಿತರಿದ್ದರು. ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ ತಿರುಗಾಟದ ಪ್ರಥಮ ಸೇವೆಯಾಟ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ಸೇವೆಯಾಟ ಭಾನುವಾರ ಸಂಜೆ ಆರಂಭವಾಯಿತು.

ಮೇಳದ ಹಿಮ್ಮೇಳ, ಮುಮ್ಮೇಳ
ಕಲಾವಿದರು, ವ್ಯವಸ್ಥಾಪಕ ಗಿರೀಶ್ ಹೆಗ್ಡೆ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ ತಿರುಗಾಟದ ಪ್ರಥಮ ಸೇವೆಯಾಟವಾಗಿ ಮೇಳದ ಯಕ್ಷಗಾನ ಕಲಾವಿದರಿಂದ ‘ಪಾಂಡವಾಶ್ವಮೇಧ’ ಪೌರಾಣಿಕ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಿತು. ನ.20 ರ ತನಕ ಪ್ರತಿ ರಾತ್ರಿ 7 ರಿಂದ 12ರ ವರೆಗೆ ಹರಕೆಯ ಸೇವಾರ್ಥಿಗಳಿಂದ ಸೇವಾ ಬಯಲಾಟ ಪ್ರದರ್ಶನ ನಡೆಯಲಿದೆ. ನ.21ರಂದು ಬೆಳಗ್ಗೆ ಶುಭ ಮುಹೂರ್ತದಲ್ಲಿ ಮೇಳದ ಶ್ರೀ ಮಹಾಗಣಪತಿ ದೇವರ ದಿಗ್ವಿಜಯ ಯಾತ್ರೆಯೊಂದಿಗೆ ತಿರುಗಾಟದ ಮುಂದಿನ ಕ್ಯಾಂಪಿಗೆ ತೆರಳಲಿದೆ.