ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ವಿರುದ್ಧ 2,57,178 ಮತಗಳ ಅಂತರದಿಂದ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ ಕೋಟ ಶ್ರೀನಿವಾಸ ಪೂಜಾರಿ ಅವರು 7,27,391 ಮತಗಳನ್ನು ಪಡೆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ 4,70,215 ಮತಗಳನ್ನು ಪಡೆದಿದ್ದಾರೆ. ಕೋಟ ಗೆಲುವು ಅಧಿಕೃತವಾಗಿ ಘೋಷಣೆಯಾಗಬೇಕಷ್ಟೆ. ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರ ಮತಕ್ಷೇತ್ರದಲ್ಲಿ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಹಾಲಿ ಶಾಸಕ ಕಿರಣ್ ಕೊಡ್ಗಿ ಅವರ ನೆರವಿನಿಂದ 51, 000ಕ್ಕೂ ಅಧಿಕ ಮತಗಳ ಲೀಡ್ ಪಡೆದಿರುವುದು ವಿಶೇಷ.