ಬೆಂಗಳೂರು: ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಣಿ ಜುಲೈ 4ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಸುಮಾರು 1,745 ಜನ ಅಪೇಕ್ಷಿತರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಪರಾಭವಗೊಂಡಿರುವ ಕ್ಷೇತ್ರಗಳ ಅವಲೋಕನ ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜುಲೈ 5 ಮತ್ತು 6 ರಂದು ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸೋಲಿಗೆ ಕಾರಣವಾದ ವಿಷಯಗಳನ್ನು ಚರ್ಚಿಸಲಿದ್ದಾರೆ.