Join The Telegram | Join The WhatsApp |
ಬಳ್ಳಾರಿ-
ಬಳ್ಳಾರಿಯ ನಲ್ಲಚರಾವು ಪ್ರದೇಶದ ಕೆರೆ ಬಳಿಯಲ್ಲಿ ರಾಜ್ಯದಲ್ಲಿಯೇ ಅತ್ಯಂತ ಎತ್ತರದ 23 ಅಡಿಯ ಸ್ಯಾಂಡಲ್‌ವುಡ್ ನಟ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಯಿತು. ರಾಜ್‌ಕುಮಾರ್ ಕುಟುಂಬ ಸದಸ್ಯರಿಂದ ಪುತ್ಥಳಿ ಅನಾವರಣ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾಗಿದ್ದರು.
ಬಳ್ಳಾರಿ ಉತ್ಸವ 2023ರ ಕೊನೆಯ ದಿನದಂದು ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ನಲ್ಲಚೇರುವು ಕೆರೆಯ ಪಕ್ಕದಲ್ಲಿ ನಿರ್ಮಿಸಿದ್ದ 23 ಅಡಿಯ ಡಾ. ಪುನೀತ್ ರಾಜ್‌ಕುಮಾರ್ ಪ್ರತಿಮೆಯನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್, ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಎಂ. ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಮುಂತಾದವರು ಉಪಸ್ಥಿತರಿದ್ದರು.
Join The Telegram | Join The WhatsApp |