ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಮುಡಾ ಹಗರಣ ಸಂಬಂಧಿಸಿ ಹೈಕೋರ್ಟ್ ತನಿಖೆಗೆ ಅನುಮತಿ ನೀಡಲಾಗಿದ್ದು ಶೀಘ್ರದಲ್ಲೇ ಎಫ್ ಐಆರ್ ದಾಖಲಾಗಲಿದೆ. ಇಂಥ ಆರೋಪ ಕೇಳಿ ಬಂದಾಗ ಈ ಹಿಂದೆ ಸಿದ್ದರಾಮಯ್ಯ ಅವರೇ ಹಲವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದೀಗ ಅವರು ತಮ್ಮ ಮುಖ್ಯಮಂತ್ರಿ ಗೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಧರಣಿಗೆ ಮುಂದಾಗಿದೆ.