
ಬೆಳಗಾವಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಪಿಕಪ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲಹೊಂಗಲದ ಮಾರುತಿ ನಗರದಲ್ಲಿ ನಡೆದಿದೆ.
ಮಾರುತಿ ನಗರದಲ್ಲಿ ರಫೀಕ್ ಬಾಬು ಸಾಬ್ ತಿಗಡಿ (38)ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಪಿಕಪ್ ವಾಹನ ಖರೀದಿಸಲು 6 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ ಸಾಲಗಾರರ ಕಿರುಕುಳಕ್ಕೆ ನೊಂದು ಪಿಕಪ್ ವಾಹನಕ್ಕೆ ನೆಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸದ್ಯ ಶವ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಲಹೊಂಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.