ನವದೆಹಲಿ: ಭ್ರಷ್ಟಾಚಾರವನ್ನು ನಿಗ್ರಹ ಮಾಡುವ ಮೂಲ ಉದ್ದೇಶದೊಂದಿಗೆ ಸ್ಥಾಪನೆಯಾ ಗಿರುವ ಲೋಕಾಯುಕ್ತರ ನೇಮಕ ಪ್ರಕ್ರಿಯೆಗೆ ವಿಸ್ತ್ರತ ಮ ಮಾರ್ಗಸೂಚಿ ರೂಪಿಸಬೇಕಾದ ಅಗತ್ಯವಿದ್ದು, ಸ್ವತಃ ತಾನೇ ರೂಪಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
‘ಲೋಕಾಯುಕ್ತರ ನೇಮಕದಲ್ಲಿ ಲೋಪ ಆಗುತ್ತಿರುವುದು ರಾಷ್ಟ್ರವ್ಯಾಪಿ ಸಮಸ್ಯೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತರನ್ನು ನೇಮಿಸುವಾಗ ಆ ಸಮಿತಿ ಯಲ್ಲಿ ಇರುವ ಸದಸ್ಯರು, ಅವರಿಗೆ ನೀಡುವ ಮಾಹಿತಿ, ಅವಧಿ, ಸಲಹೆ ನೀಡುವ ಅಧಿಕಾರ, ಚರ್ಚಾ ಪ್ರಕ್ರಿಯೆ ಮುಂತಾದವುಗಳ ಕುರಿತು ವಿಸ್ತ್ರತ ಮಾರ್ಗಸೂಚಿ ರೂಪಿಸಲಾಗುವುದು’ ಎಂದಿದೆ.
ಲೋಕಾಯುಕ್ತರನ್ನು ನೇಮಿಸುವಾಗ ಮುಖ್ಯಮಂತ್ರಿ, ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಮತ್ತು ವಿಪಕ್ಷ ನಾಯಕರ ಸಲಹೆಯನ್ನು ಆಧರಿಸಿ ಒಮ್ಮತ ವ್ಯಕ್ತಿಯನ್ನು ಆಯ್ಕೆಮಾಡಬೇಕು ಎಂದು ಕಾನೂನಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಮಧ್ಯ ಪ್ರದೇಶದಲ್ಲಿ ಲೋಕಾಯುಕ್ತರ ನೇಮಕ ವೇಳೆ ಸರ್ಕಾರ ತಮ್ಮ ಸಲಹೆಯನ್ನು ಸ್ವೀಕರಿಸಿರಲಿಲ್ಲ ಎಂದು ವಿಪಕ್ಷ ನಾಯಕ ಉಮಂಗ್ ಸಿಂಘರ್ ಅರ್ಜಿ ಸಲ್ಲಿಸಿದ್ದರು.