ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಬೆಳಗಾವಿ ಮಹಾ ನಗರ ಜಿಲ್ಲಾ ಅಧ್ಯಕ್ಷರನ್ನಾಗಿ ಸುರೇಶ ಲಕ್ಷ್ಮಣ ಅಜ್ಜನಕಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಶಿಫೀರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದ್ದು, ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.