ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾರ ಮತ್ತು ಕಿತ್ತೂರು ಒಳಗೊಂಡ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಅಚ್ಚರಿ ಅಭ್ಯರ್ಥಿಯನ್ನು ಬಿಜೆಪಿ ಆಯ್ಕೆ ಮಾಡಿದೆ. ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಲಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಅವರ ಸ್ಥಾನಕ್ಕೆ ಕಾಗೇರಿ ಅವರನ್ನು ತರುವ ಮೂಲಕ ಬಿಜೆಪಿ ವರಿಷ್ಠರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಅನಂತ್ ಕುಮಾರ್ ಹೆಗಡೆ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಲೋಕಸಭಾ ಸದಸ್ಯರಾಗಿ ಸಾಕಷ್ಟು ವಿವಾದ, ಚರ್ಚೆಗೆ ಕಾರಣರಾಗಿದ್ದರು.