Join The Telegram | Join The WhatsApp |
ನವದೆಹಲಿ-
ಭಾರತೀಯ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಟೀಂ ಇಂಡಿಯಾದ ಮಿಸ್ಟರ್ 360 ಎಂದೇ ಖ್ಯಾತಿ ಪಡೆದ ಸೂರ್ಯಕುಮಾರ್ ಯಾದವ್ ಕ್ರಿಕೆಟ್ ಲೋಕದಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅವರಿಗೆ 2022 ರ ICC T20I ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
31 ಪಂದ್ಯಗಳಲ್ಲಿ 46.56 ರ ಸರಾಸರಿಯಲ್ಲಿ 1164 ರನ್ ಮತ್ತು 187.43 ಸ್ಟ್ರೈಕ್ ರೇಟ್ ಇದೆ. ವರ್ಷದ ಅವಧಿಯಲ್ಲಿ ಯಾದವ್ ಅದ್ಭುತ 68 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ, ಎರಡು ಶತಕ ಮತ್ತು ಒಂಬತ್ತು ಅರ್ಧ ಶತಕಗಳನ್ನು ಸಿಡಿಸುವ ಮೂಲಕ ಅತ್ಯದ್ಭುತ ಸಾಧನೆ ಮಾಡಿದ್ದಾರೆ.
ಸೂರ್ಯಕುಮಾರ್ ಯಾದವ್ ಪ್ರಸ್ತುತ T20 ನಲ್ಲಿ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಆಗಿದ್ದಾರೆ. ICC T20 ರ್ಯಾಂಕಿಂಗ್‌ನಲ್ಲಿ 908 ಅಂಕಗಳನ್ನು ಹೊಂದಿದ್ದಾರೆ. ಕಳೆದ ವರ್ಷವಷ್ಟೇ ಅವರು ಈ ಸಾಧನೆ ಮಾಡಿದ್ದರು.
Join The Telegram | Join The WhatsApp |