ಬೆಳಗಾವಿ :
ಬೆಳಗಾವಿಯ ಸುವರ್ಣ ವಿಧಾನಸೌಧ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸ್ಪೀಕರ್ ಯು.ಟಿ. ಖಾದರ್ ಅವರು ಸದ್ಯ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿದೆ. ಆದರೆ ಅದೇ ವೆಚ್ಚದಲ್ಲಿ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಅಲಂಕರಿಸಲು ಲೈಟಿಂಗ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗಿದೆ. ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸಲು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು.