ಬೆಳಗಾವಿ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಉದ್ಘಾಟಿಸಿದರು. ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿ ಹಲವು ಸಚಿವರು ಮತ್ತು ಎಲ್ಲಾ ಶಾಸಕರು ಈ ಸಂದರ್ಭಕ್ಕೆ ಸಾಕ್ಷಿಯಾದರು.