ಬೆಳಗಾವಿ: ಉತ್ತರ ಕನ್ನಡ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಅಣಿಯಾಗಿದ್ದ ಸ್ವಾಮೀಜಿ ಇದೀಗ ಕಣದಿಂದ ಹಿಂದೆ ಸರಿದಿದ್ದಾರೆ.

ಉ.ಕ.ಮತಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯಥಿ ೯ಯಾಗಿ ಸ್ಪರ್ಧಿಸಬೇಕೆಂದಿದ್ದ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಕಿತ್ತೂರು ತಾಲೂಕಿನ ದೇಗುಲಹಳ್ಳಿ ಗ್ರಾಮದ ಮಡಿವಾಳೇಶ್ವರ ಮಠದ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜ ಸೇವೆ ಮಾಡಲು ಇಚ್ಚಿಸಿ ನಾಮಪತ್ರ ಸಲ್ಲಿಸುವ ತಯಾರಿಯಲ್ಲಿದೆ. ಆದರೆ, ಭಕ್ತರು ಲೋಕಸಭೆ ಕ್ಷೇತ್ರದ ವ್ಯಾಪ್ತಿ ಅಪಾರವಾಗಿದೆ. ನಿಗದಿತ ಸಮಯದಲ್ಲಿ ಎಲ್ಲಾ ಮತದಾರರನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ ಹಾಗೂ ಭಕ್ತರಿಂದ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಆಸೆಯಂತೆ ಚುನಾವಣೆಗೆ ಸ್ಪರ್ಧಿಸುವ ವಿಚಾರದಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದ್ದಾರೆ.