ಬೆಳಗಾವಿ : ಕೆಎಲ್‌ಇ ಸಂಸ್ಥೆಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯ ವೇಣುಗೋಪಾಲ ರೆಡ್ಡಿ ವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಕರನ್ನು ಗೌರವಿಸುವ ಮನೋಪ್ರವೃತ್ತಿಯನ್ನು ವಿದ್ಯಾರ್ಥಿಗಳು ತಮಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ತಂದೆ-ತಾಯಿಯರು ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆದರೆ ಮುಂದೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಮತ್ತು ಗುರಿಯನ್ನು ಮುಟ್ಟಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಎಲ್ಲ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.