ಬೆಳಗಾವಿ:
ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಏರ್ಪೋರ್ಟ್ ಉದ್ಯೋಗಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.

ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರಲ್ಲಿ ಒಬ್ಬರ ಹೆಸರು ಗೊತ್ತಾಗಿದ್ದು, ರೀತು ಪಾಟೀಲ ಎಂದು ಗುರುತಿಸಲಾಗಿದೆ.

ಗಾಯಾಳು ರೀತು ಪಾಟೀಲ ಹಾಗೂ ಇತರ
ಐವರು ಬೆಳಗಾವಿ ಏರ್‌ಪೋರ್ಟ್‌ ಉದ್ಯೋಗಿಗಳಾಗಿದ್ದು, ಒಂದೇ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.