ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ.

ಕೊಲೆಯಾದ ವೆಂಕಟೇಶ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಅವರು ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಔಷಧದ ಅಂಗಡಿಯಿಂದ ಸ್ಕೂಟಿ ಮೇಲೆ ಮನೆಗೆ ಹೊರಟಿದ್ದರು. ಆಗ ದಾರಿಗೆ ಅಡ್ಡಗಟ್ಟಿದ ದುಷ್ಕರ್ಮಿಗಳು ಲಾಂಗ್‌ ಅನ್ನು ಅವರ ಮೇಲೆ ಬೀಸಿದ್ದಾರೆ ಎಂದು ಹೇಳಲಾಗಿದೆ.
ಲಾಂಗ್‌ ಬೀಸಿದ ರಭಸಕ್ಕೆ
ಎಡಗೈ ತೋಳಿನ ಭಾಗ ಕಟ್ ಆಗಿದ್ದು, ವೆಂಕಟೇಶ ಅವರು ಸ್ಕೂಟಿ ಸಮೇತ ನೆಲಕ್ಕೆ ಬಿದ್ದಿದ್ದಾರೆ. ನಂತರ ಲಾಂಗ್ ನಿಂದ ಮುಖವನ್ನು ಕೊಚ್ಚಲಾಗಿದೆ. ಹೊಟ್ಟೆಯ ಭಾಗಕ್ಕೆ ಇರಿಯಲಾಗಿದೆ. ನಂತರ ವೆಂಕಟೇಶ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹತ್ಯೆಯಾದ ವೆಂಕಟೇಶ ಅವರ ಮಗ ಪೊಲೀಸರ ಬಳಿ, ತಮ್ಮ ತಂದೆ ತಮ್ಮೂರಿನ ರಸ್ತೆಯಲ್ಲಿರುವ ಬಾರ್ ಬಳಿ ಕೆಲವು ಅಕ್ಕ ಪಕ್ಕದ ಗ್ರಾಮದ ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಬೈದು ಬುದ್ದಿವಾದ ಹೇಳಿದ್ದರು. ಹಾಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ದೂರು ನೀಡಿರುವ ಮಗ, ಕೆಲವರ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಪರಿಶೀಲನೆ ನಡೆಸಿದೆ.