Join The Telegram | Join The WhatsApp |
ಬೆಳಗಾವಿ :
ಧಾರವಾಡ, ಉಡುಪಿ, ರಾಯಚೂರು, ಹಾವೇರಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಜವಳಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಜವಳಿ ಕ್ಷೇತ್ರಕ್ಕೆ ಪ್ರೋತ್ಸಾಹಿಸಲಾಗುತ್ತದೆ. ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಯಡಿ ಆರು ಜವಳಿ ಪಾರ್ಕ್ ಸ್ಥಾಪಿಸಲಾಗಿದೆ. ಇದರ ಜೊತೆಗೆ ಬೇರೆ ಬೇರೆ ಜಿಲ್ಲೆಗಳಲ್ಲೂ ಜವಳಿ ಪಾರ್ಕ್ ಸ್ಥಾಪಿಸಲಾಗುವುದು. ಕನಿಷ್ಠ 15 ಎಕರೆ ಜಾಗ ಹೊಂದಿ ಜವಳಿ ಪಾರ್ಕ್ ಸ್ಥಾಪನೆ ಮಾಡಲು ಮುಂದೆ ಬಂದಲ್ಲಿ ಸರಕಾರ ಅಂತವರಿಗೆ ಅಗತ್ಯ ಸಹಕಾರ ನೀಡಲಿದೆ. ರಾಜ್ಯ ಸರಕಾರ ನೇಕಾರರ ಶೇಕಡಾ 90 ರಷ್ಟು ಬೇಡಿಕೆ ಈಡೇರಿಸಿದೆ. ಉಳಿದ ಬೇಡಿಕೆ ಅನುಷ್ಠಾನ ಮಾಡಲಿದೆ ಎಂದು ತಿಳಿಸಿದರು.
Join The Telegram | Join The WhatsApp |