ಅಯೋಧ್ಯೆ :
ತಮಿಳುನಾಡಿನ 620 ಕೆಜಿ ತೂಕದ ಗಂಟೆಯನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಇರಿಸಲಾಗುವುದು.
ಗಂಟೆಯಲ್ಲಿ “ಜೈ ಶ್ರೀರಾಮ್” ಎಂದು ಬರೆಯಲಾಗಿದೆ.

ತಮಿಳುನಾಡಿನಲ್ಲಿ ತಯಾರಿಸಲಾದ ಗಂಟೆಯನ್ನು ಈಗಾಗಲೇ ಅಯೋಧ್ಯೆಗೆ ತರಲಾಗಿದ್ದು ಮಂದಿರದ ನಿರ್ಮಾಣ ಕಾರ್ಯ ಮುಗಿದ ಬಳಿಕ ವಿಶೇಷವಾಗಿ ತಯಾರಿಸಲಾದ ಈ ಗಂಟೆಯನ್ನು ದೇವಾಲಯದಲ್ಲಿ ಸ್ಥಾಪಿಸಲಾಗುವುದು ಎಂದು ದೇವಾಲಯದ ಟ್ರಸ್ಟ್ ಹೇಳಿಕೆ ನೀಡಿದ್ದಾರೆ.

ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ಅಂತಿಮ ಹಂತಕ್ಕೆ ಬಂದಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಕೆಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.