ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ
ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್‌ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ.

ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದೆವು. ಈ ವೇಳೆ ಬೆಳಿಗ್ಗೆ ಗ್ರಾಮದ ಸಮೀಪ ಕಾಡಿನಲ್ಲಿ ಈತ ಅವಿತುಕೊಂಡಿರುವ ಕುರಿತ ಮಾಹಿತಿ ಲಭಿಸಿತು. ಕೂಡಲೇ ಆತನನ್ನು ಬಂಧಿಸಲಾಯಿತು. ಬಾಲಕಿಯ ರುಂಡದ ಕುರಿತು ಇನ್ನೂ ತನಿಖೆ ನಡೆಸಬೇಕಿದೆ ಎಂದು ಪೋಲೀಸರು ತಿಳಿಸಿದ್ದಾರೆ.