ಬೆಳಗಾವಿ :
ಇಲ್ಲಿಯ ಕೋಟೆಕೆರೆ ಉದ್ಯಾನದಲ್ಲಿ ಶನಿವಾರ ಸಂಜೆ ಮಾತನಾಡುತ್ತಾ ಕುಳಿತಿದ್ದ ಅಕ್ಕ- ತಮ್ಮನನ್ನು ಪ್ರೇಮಿಗಳೆಂದು ತಿಳಿದು ಅಲ್ಲಿಂದ ಅಪಹರಿಸಿ ಹಲ್ಲೆ ನಡೆಸಿದ ಗುಂಪನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಬೆಳಗಾವಿ ಪೊಲೀಸರು ಭಾನುವಾರ ಎಂಟು ಜನರನ್ನು ಬಂಧಿಸಿದ್ದಾರೆ.

ಒಟ್ಟು 17 ಜನರ ವಿರುದ್ಧ ದಾಖಲಾಗಿದೆ. ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ತಿಳಿಸಿದ್ದಾರೆ.