Join The Telegram | Join The WhatsApp |
ಕಟೀಲು-
ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58 )ಗುರುವಾರ ರಾತ್ರಿ ಕಟೀಲಿನ ಸರಸ್ವತಿ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನ ವೇಳೆ ನಿಧನರಾಗಿದ್ದಾರೆ. ಕಟೀಲು ನಾಲ್ಕನೇ ಮೇಳದ ಕಲಾವಿದರಾಗಿದ್ದಾರೆ. ಗುರುವಾರ ರಾತ್ರಿ ಸರಸ್ವತಿ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಅವರು ಶಿಶು ಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನವಾಗುತ್ತಿತ್ತು. ರಂಗಸ್ಥಳದಲ್ಲಿ ನಿಂತಿದ್ದ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾದರೂ ನಿಧನರಾದರೆಂದು ಘೋಷಿಸಲಾಯಿತು.
Join The Telegram | Join The WhatsApp |