This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾದ ಬಸ್

Join The Telegram Join The WhatsApp

ಬೆಳಗಾವಿ : 

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಸಮೀದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಕೊಲ್ಲಾಪುರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಳೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಇರುವ ಗುಲಾಬಶಾವಲಿ ದರ್ಗಾ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ-4ರಲ್ಲಿ ಸಂಚರಿಸುತ್ತಿರುವಾಗ ಆಕಸ್ಮಿಕವಾಗಿ ಬಸ್ಸಿಗೆ ಬೆಂಕಿ ತಗುಲಿಕೊಂಡಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬಸ್ಸಿನ ಬೆಂಕಿ ನಂದಿಸುವಷ್ಟರಲ್ಲಿ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ. ಯಮಕನಮರಡಿ ಸಿಪಿಐ ರಮೇಶ ಛಾಯಾಗೋಳ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Join The Telegram Join The WhatsApp
Admin
the authorAdmin

Leave a Reply