ಬೆಂಗಳೂರು : ಲೋಕಸಭೆಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಶಿಗ್ಗಾವಿ), ಎಚ್‍.ಡಿ. ಕುಮಾರಸ್ವಾಮಿ (ಚನ್ನಪಟ್ಟಣ) ಹಾಗೂ ಈ. ತುಕಾರಾಂ ಅವರು ಪ್ರತಿನಿಧಿಸುತ್ತಿದ್ದ ಸಂಡೂರು ವಿಧಾನಸಭಾ ಮತ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ.

ಜೆಡಿಎಸ್ ನ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಲ್ಲಿ, ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್, ಶ್ರೀಕಾಂತ ದುಂಡಿಗೌಡ್ರ, ಶಶಿಧರ ಯಲಿಗಾರ ಅವರ ಹೆಸರು ಶಿಗ್ಗಾವಿ ಮತಕ್ಷೇತ್ರಕ್ಕೆ ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಪಕ್ಷದಿಂದ ಸಂಡೂರು ಮತಕ್ಷೇತ್ರದಲ್ಲಿ ಅವರ ಪುತ್ರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ.
ಬಸವರಾಜ ಬೊಮ್ಮಾಯಿ ಹಾವೇರಿ(ಬಿಜೆಪಿ), ಎಚ್. ಡಿ. ಕುಮಾರಸ್ವಾಮಿ ಮಂಡ್ಯ(ಜೆಡಿಎಸ್) ಮತ್ತು ತುಕಾರಾಂ ಬಳ್ಳಾರಿ (ಕಾಂಗ್ರೆಸ್)ಲೋಕಸಭಾ ಮತಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.