Join The Telegram | Join The WhatsApp |
ಬೆಳಗಾವಿ :
ಸೋಮವಾರದಿಂದ ಬೆಳಗಾವಿಯಲ್ಲಿ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ವಿಶೇಷ ಅಧಿವೇಶನ ನಡೆಯಲಿದೆ. ಇದಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಗರದ ವ್ಯಾಕ್ಸಿನ್ ಡಿಪೋದಲ್ಲಿ ಮಹಾಮೇಳಾವವನ್ನು ಆಯೋಜಿಸುತ್ತಿದೆ.
ಮಹಾಮೇಳಾವದಲ್ಲಿ ಪ್ರಧಾನ ಭಾಷಣಕಾರರಾಗಿ ಮಹಾರಾಷ್ಟ್ರ ಗಡಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಹಾತ ಕಣಂಗಲೆ ಸಂಸದ ಧೈರ್ಯಶೀಲ ಮಾನೆ ಆಗಮಿಸುತ್ತಿದ್ದಾರೆ. ಅವರಿಗೆ ವೈ ಕಟಗರಿ ಭದ್ರತೆ ನೀಡುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಮನವಿ ಮಾಡಿರುವುದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚಿಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ನಡೆಸಿದ್ದರು. ಗಡಿಯಲ್ಲಿ ಯಾವುದೇ ಪ್ರಚೋದನಕಾರಿ ಚಟುವಟಿಕೆ ನಡೆಸದಂತೆ ಕಠಿಣ ಎಚ್ಚರಿಕೆ ರವಾನಿಸಿದ್ದರು. ಆದಾಗ್ಯೂ ಮಹಾರಾಷ್ಟ್ರದ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಕರ್ನಾಟಕಕ್ಕೆ ವಿರೋಧವಾಗಿ ನಡೆದುಕೊಳ್ಳುತ್ತಿದ್ದು ಅವರಿಗೆ ಜಿಲ್ಲಾಡಳಿತ ಯಾವ ರೀತಿಯಲ್ಲಿ ಬೆಳಗಾವಿ ಪ್ರವೇಶಿಸಲು ಅನುಮತಿ ನೀಡುತ್ತದೆ ಎನ್ನುವುದು ಕಾದು ನೋಡಬೇಕಿದೆ.
Join The Telegram | Join The WhatsApp |