ಬೆಂಗಳೂರು:
ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಜನವಾಹಿನಿ, ಕನ್ನಡಪ್ರಭ ಪತ್ರಿಕೆಗಳ ಪ್ರಸರಣಾ ವಿಭಾಗದಲ್ಲಿ ಕೆಲಸ ಮಾಡಿದ್ದ ಸಿ.ಟಿ.ಕಾಳಪ್ಪ ಅವರು ಮೃತಪಟ್ಟಿದ್ದು ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಬೇಕೆಂದು
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ ) ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.

ಸಿಎಂ ಪರಿಹಾರ ನಿಧಿಯಿಂದ ಅಕೌಂಟ್ ಗೆ ಹಣ ಬಂದಿರುವುದಾಗಿ ಸಿ.ಟಿ.ಕಾಳಪ್ಪ ಅವರ ಪತ್ನಿ ಚೋಂದಮ್ಮ ಅವರು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಪೋನ್ ಮಾಡಿ ಖಚಿತಪಡಿಸಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕೃತಜ್ಞತೆ:

ಸಿ.ಟಿ.ಕಾಳಪ್ಪ ಅವರ ಕುಟುಂಬಕ್ಕೆ ಮಂಜೂರಾಗಿದ್ದ ಪರಿಹಾರವನ್ನು ಮಾನವೀಯ ದೃಷ್ಟಿಯಿಂದ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೃತಜ್ಞತೆಗಳನ್ನು ಸಲ್ಲಿಸಿದೆ.