ಬೆಳಗಾವಿ: ಕರ್ಲೆ ಗ್ರಾಮದ ಬಳಿ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಭೀಕರ ಕೊಲೆಗೈದ ಪ್ರಕರಣದ ಸಂಬಂಧ ತನಿಖೆಗೆ ಇದೀಗ ಎರಡು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನಿಂಗ್ ಅವರು, ಎರಡು ವಿಶೇಷ ಪೊಲೀಸ್ ತಂಡಗಳು ಈ ಬಗ್ಗೆ ತನಿಖೆ ನಡೆಸುತ್ತೇವೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದ್ದು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದರು.

ಸೋಮವಾರ ಕರ್ಲೆ ಬಳಿ ಮೋಹನ ತಳವಾರ ಅವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಕೊನೆಗೆ ಚಿಕಿತ್ಸೆ ಫಲಿಸದೇ ಮೋಹನ ತಳವಾರ ಮೃತಪಟ್ಟಿದ್ದರು. ಇವರ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸ್ ತಂಡಗಳ ರಚನೆ ಮಾಡಲಾಗಿದೆ.