ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 8ರಂದು ಪ್ರಧಾನಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡುವುದು ಬಹುತೇಕ ಖಚಿತವಾಗಿದೆ.

ಅಂದು ಸಂಜೆ ನಾಲ್ಕಕ್ಕೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ 240 ಸ್ಥಾನ ಪಡೆದುಕೊಂಡಿದೆ. ಆದರೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ 290ಕ್ಕೂ ಅಧಿಕ ಸ್ಥಾನ ಪಡೆದುಕೊಂಡಿದ್ದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಹುಮತಕ್ಕೆ 272 ಮ್ಯಾಜಿಕ್ ನಂಬರ್ ಆಗಿದೆ.

ಮುಂದಿನ ಪ್ರಧಾನಿ ಮತ್ತು ಸಚಿವ ಸಂಪುಟದ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಿದ್ಧತೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನವನ್ನು ಬುಧವಾರದಿಂದ ಭಾನುವಾರದವರೆಗೆ ಸಾರ್ವಜನಿಕರಿಗೆ ಮುಚ್ಚಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಗಟನೆ ಹೊರಡಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಮಂತ್ರಿ ಪರಿಷತ್ತಿನ ಪ್ರಮಾಣವಚನ ಸಮಾರಂಭದ ಸಿದ್ಧತೆಗೆ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನವನ್ನು ಮುಚ್ಚಲಾಗುತ್ತಿದೆ.