ಮಂಗಳೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ.ಕೆ. ಶಿವಕುಮಾರ್ ಅವರು ಪತ್ರಕರ್ತರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳು ಜನರ ವಿಶ್ವಾಸಕ್ಕೆ ಪಾತ್ರವಾಗಿವೆ. ಮುಂದೆಯೂ ಇರಲಿದೆ. ದೇಶಕ್ಕೆ ಮಾದರಿಯಾದ ಗ್ಯಾರಂಟಿ ಯೋಜನೆ ಇದಾಗಿದೆ. ಶಕ್ತಿ ಯೋಜನೆಯನ್ನು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಕಾಂಗ್ರೆಸ್ ಪಕ್ಷ ಯಾವುದೇ ಯೋಜನೆಯನ್ನು ಜಾರಿಗೆ ತಂದರೂ ಅದು ಸದಾ ಮುಂದುವರಿದುಕೊಂಡು ಹೋಗಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರು ಅದನ್ನು ನಿಲ್ಲಿಸಿದಂತೆ ಇರುವ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಜಾರಿಗೆ ತಂದಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷ ಊಳುವವನೇ ಹೊಲದ ಒಡೆಯ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿತ್ತು. ಬಿಜೆಪಿ ರಾಜಸ್ಥಾನ, ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದೆ ಅವರು ದೂರಿದರು.

ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ಅಶೋಕ ಜನಮನ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ನಡೆದಿವೆ. ಹಳ್ಳಿಹಳ್ಳಿಗಳಿಂದ ಸಹಸ್ರಾರು ಜನ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಅಶೋಕ್ ರೈ ಅವರು ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಈ ಅಪರೂಪದ ಕಾರ್ಯಕ್ರಮವನ್ನು ಏರ್ಪಡಿಸುತ್ತಿದ್ದಾರೆ.