ಉಡುಪಿ: ಉಡುಪಿಯ ಗ್ರಾಮವೊಂದರ ಹೆಸರು ಬದಲಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳಿಂದ ಹೆಸರು ಬದಲಾವಣೆಯ ನಕಾಶೆ ವೈರಲ್ ಆಗಿದ್ದು ಕೊನೆಗೂ ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿಯೇ ಸ್ವತಃ ಸ್ಪಷ್ಟನೆ ನೀಡಿದ್ದಾರೆ.

Dishank app ನಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ಮತ್ತು 85 ರಲ್ಲಿ SULTANAPURA ಎಂದು ದಾಖಲಾಗಿರುತ್ತದೆ ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದನ್ನು ಗಮನಿಸಲಾಗಿದೆ. ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120& 85 ರ ಗ್ರಾಮ ನಕಾಶೆಯನ್ನು ಲಗತ್ತಿಸಲಾಗಿದೆ.
ಸಾರ್ವಜನಿಕರು ಸಹ ಸದರಿ ಗ್ರಾಮದ ಪೂರ್ಣ ಗ್ರಾಮ ನಕಾಶೆಯನ್ನು https://www.landrecords.karnataka.gov.in/ser…/Default.aspx
ನಲ್ಲಿ Download ಮಾಡಬಹುದಾಗಿದೆ.
ಗ್ರಾಮ ನಕಾಶೆಯಲ್ಲಿ *SULTANAPUR* ಎಂದು ದಾಖಲಾಗಿರುವುದಿಲ್ಲ.

ಕಂದಾಯ/ಭೂಮಾಪನ ಇಲಾಖೆ ದಾಖಲೆಗಳಲ್ಲಿ *Sultanpur* ಎಂದು ಇರುವುದಿಲ್ಲ, ಸರ್ವೇ ನಂಬರು 120ರ RTC ಯಲ್ಲೂ ಈ ರೀತಿಯ ಯಾವುದೇ ಉಲ್ಲೇಖವಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ.