ಬೆಳಗಾವಿ: ಮೂಡಲಗಿ ತಾಲೂಕಿನ ನಾಗನೂರು ಗ್ರಾಮದ ಬಳಿ ರಸ್ತೆ ದಾಟುವಾಗ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತ ಬಳಿಕ ತನ್ನದೇ ವಾಹನದಲ್ಲಿ ಚಾಲಕ ಆತನನ್ನು ಆಸ್ಪತ್ರೆಗೆ ಕರೆತಂದಿದ್ದಾನೆ. ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ನಂತರ ಕಾರು ಚಾಲಕ ತಾನೇ ಹೋಗಿ ಪೋಲಿಸರಿಗೆ ಶರಣಾಗಿದ್ದಾನೆ.

ನಾಗನೂರು ಗ್ರಾಮದ ವಿನಯ ಲಕ್ಷ್ಮಣ ಕೆಂಚನವರ(8) ವರ್ಷ ಮೃತಪಟ್ಟಿದ್ದಾನೆ. ಕಾರು ಗುದ್ದಿದ್ದರಿಂದ ಗಾಯಗೊಂಡಿದ್ದ ಬಾಲಕನನ್ನು ಕಾರು ಚಾಲಕ ಆಸ್ಪತ್ರೆಗೆ ಕರೆತಂದಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಲ್ಲಿಂದ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆಸ್ಪತ್ರೆ ಒಳಗೆ ಪೋಷಕರು ಬಾಲಕನನ್ನು ತೆಗೆದುಕೊಂಡು ಹೋಗುತ್ತಿದ್ದಂತೆ ಚಾಲಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.