ದೆಹಲಿ : ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ. ಮುಂಜಾನೆ 7 ಗಂಟೆಗೆ ಆರಂಭವಾದ ಮತದಾನಕ್ಕೆ ದೇಶದ ವಿವಿಧ ರಾಜ್ಯಗಳಲ್ಲಿ ಉತ್ಸಾಹದ ಪ್ರತಿಕ್ರಿಯೆ ಕಂಡುಬಂತು.

ಸಾರ್ವತ್ರಿಕ ಚುನಾವಣೆ ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿದ್ದು, ಜೂನ್ 1ರಂದು ಕೊನೆಗೊಳ್ಳಲಿದೆ. ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಮತ್ತು ಫಲಿತಾಂಶ ಘೋಷಣೆ ಜೂನ್ 4ರಂದು ನಡೆಯಲಿದೆ. ಇಂದು ಒಟ್ಟು 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.