ಮುಂಬಯಿ :
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನಿನ್ನೆ ಪಕ್ಷಕ್ಕೆ ರಾಜೀನಾಮೆ ನೀಡಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಇಂದೇ ಕಮಲ ಪಕ್ಷ ಸೇರ್ಪಡೆಗೊಳ್ಳಬಹುದು ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.

ಅಶೋಕ ಚವಾಣ್‌ ಮುಂಬೈನಲ್ಲಿ ಮಧ್ಯಾಹ್ನ 12ಗಂಟೆಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಗೆ ಸೇರುವ ಊಹಾಪೋಹಗಳ ನಡುವೆಯೇ ಅಶೋಕ್ ಸೋಮವಾರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದ್ದರು.

ರಾಹುಲ್ ನಾರ್ವೇಕರ್ ಅವರಿಗೆ ವಿಧಾನಸಭೆ ಸದಸ್ಯತ್ವದ ರಾಜೀನಾಮೆ ಸಲ್ಲಿಸಿದ್ದಾರೆ, ಬಿಜೆಪಿಗೆ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಸೋಮವಾರ ಹೇಳಿದ್ದರು. ಭೋಕರ್ ಕ್ಷೇತ್ರದ ಶಾಸಕ ಚವಾಣ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದರು.